ನವದೆಹಲಿ : ಕೇಂದ್ರ ಬಜೆಟ್ನಲ್ಲಿ ಪ್ರಥಮ ಬಾರಿಗೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ವೈವಿಧ್ಯಮಯ ಸಂಸ್ಕೃತಿ ಮತ್ತು ಸಮುದಾಯದ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಡಿಯಿಡಲಾಗಿದೆ.
ಪ್ರವಾಸೋದ್ಯಮವನ್ನು ಉತ್ತೇಜಿಸಲು ಭಾರತೀಯ ಹೋಟೆಲ್ಗಳು, ಲೆಮನ್ ಟ್ರೀ ಹೋಟೆಲ್ಗಳು ಸೇರಿ ಹೋಟೆಲ್ ಕಂಪನಿಗಳತ್ತ ಸರ್ಕಾರ ಗಮನ ಹರಿಸಿದೆ.
ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರವಾಸೋದ್ಯಮಕ್ಕಾಗಿ ಪ್ಯಾಕೇಜ್ ರೂಪದಲ್ಲಿ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಭೌತಿಕ ಸಂಪರ್ಕ, ವರ್ಚುವಲ್ ಸಂಪರ್ಕ, ಪ್ರವಾಸಿ ಮಾರ್ಗದರ್ಶಿಗಳು, ಬೀದಿ ಬದಿಗಳಲ್ಲಿ ಉನ್ನತ ಗುಣಮಟ್ಟ ಆಹಾರ ಮತ್ತು ಪ್ರವಾಸಿ ಭದ್ರತೆಯಂತಹ ಅಂಶಗಳ ಬಗ್ಗೆ ಗಮನ ನೀಡಲಾಗಿದೆ. ಜತೆಗೆ ಪ್ರವಾಸ ಅನುಭವವನ್ನು ಹೆಚ್ಚಿಸಲು ಎಲ್ಲಾ ಸಂಬಂಧಿತ ಅಂಶಗಳನ್ನು ಅಪ್ಲಿಕೇಶನ್ನಲ್ಲಿ ಲಭ್ಯವಾಗುವಂತೆ ಮಾಡಲಾಗುವುದು. ಪ್ರತಿ ತಾಣವನ್ನು ಅಭಿವೃದ್ಧಿಪಡಿಸಲಾಗುವುದು. ಇದೊಂದು ಕಂಪ್ಲೀಟ್ ಪ್ಯಾಕೇಜ್ ಆಗಲಿದೆ.
ಈ ಮೂಲಕ ದೇಶೀಯ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ವಿವಿಧ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದರಿಂದ ವಿಶೇಷವಾಗಿ ಯುವ ಜನಾಂಗಕ್ಕೆ ಉದ್ಯೋಗ ಮತ್ತು ಉದ್ಯಮಶೀಲತೆಗೆ ಈ ಕ್ಷೇತ್ರ ವಿಫುಲ ಅವಕಾಶ ದೊರೆಯಲಿದೆ. ಸರ್ಕಾರಿ ಕಾರ್ಯಕ್ರಮ ಮತ್ತು ಸಾರ್ವಜನಿಕ-ಖಾಸಗಿಗಳ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮದ ಪ್ರಚಾರವನ್ನು ಮಿಷನ್ ಮೋಡ್ನಲ್ಲಿ ಕೈಗೊಳ್ಳಕೊಳ್ಳಲು ಕೇಂದ್ರ ಮುಂದಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಕೇಂದ್ರ ಬಜೆಟ್ : ಪ್ರಥಮ ಬಾರಿಗೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ
Previous Articleಕೇಂದ್ರ ಬಜೆಟ್ ಕಾರ್ಯಕ್ರಮಗಳ ಕುರಿತು ಬಿಜೆಪಿಯಿಂದ ರಾಷ್ಟ್ರವ್ಯಾಪಿ ಅಭಿಯಾನ
Next Article ಅರಣ್ಯದಲ್ಲಿ ತ್ಯಾಜ್ಯ ಸುರಿದ ಇಬ್ಬರ ಬಂಧನ