ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು ಈ ದಿನದಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯದ ನೇರಪ್ರಸಾರವನ್ನು ವೀಕ್ಷಿಸಲೆಂದು ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಚಿತಪಡಿಸಿದ್ದು, ಕೇಂದ್ರ ಸರ್ಕಾರ ಈ ವಿಚಾರವಾಗಿ ಅಧಿಸೂಚನೆಯನ್ನೂ ಸಹ ಹೊರಡಿಸಿದೆ.