ನವದೆಹಲಿ: ರಾಷ್ಟ್ರೀಯ ಕುಸ್ತಿ ಫೆಡರೇಶನ್ ನೂತನ ಸಂಸ್ಥೆಯನ್ನು ಕೇಂದ್ರ ಸಚಿವಾಲಯ ಅಮಾನತ್ತುಗೊಳಿಸಿದೆ. ಇತ್ತೀಚೆಗಷ್ಟೇ ಚುನಾವಣೆ ನಡೆದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಗೆಲುವು ಸಾಧಿಸಿದ್ದರು. ಇದರ ಬೆನ್ನಲ್ಲೇ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ಮಾಡಿದ್ದ ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದರು.
ಇದೀಗ ಕೇಂದ್ರ ಕ್ರೀಡಾ ಸಚಿವಾಲಯವು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ. ಸಂಜಯ್ ಸಿಂಗ್ ನೇತೃತ್ವದ ಹೊಸ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.
ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಕುಸ್ತಿ ಫೆಡರೇಶನ್ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ಭಾನುವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ.