ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ ಅವರಿಗೆ ಆಹ್ವಾನ ನೀಡಿದ್ದರು. ಅದರಂತೆ 67 ವಯಸ್ಸಿನ ಚಂಪೈ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.
ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರು ಶಾಸಕರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಂದು ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ.
ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಉನ್ನತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಅವರು 600 ಕೋಟಿ ರೂ. ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…