ರಾಷ್ಟ್ರೀಯ

ಹಣ ಪಾವತಿ ಕುರಿತು ಛತ್ತೀಸಗಢ ಸಿಎಂ ಮೇಲೆ ಆರೋಪ ಮಾಡಿಲ್ಲ: ಅಸೀಮ್‌ ದಾಸ್‌

ನವದೆಹಲಿ : ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಅಸೀಮ್‌ ದಾಸ್‌ ತನ್ನ ಹೇಳಿಕೆಯನ್ನು ಬದಲಿಸಿದ್ದು, ತಾನು ಛತ್ತೀಸಗಢ ಸಿಎಂ ಮೇಲೆ ಹಣ ಪಾವತಿ ಕುರಿತು ಆರೋಪ ಮಾಡಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾನೆ.

ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ೫೦೮ ಕೋಟಿ ರೂ ಹಣವನ್ನು ಸಿಎಂ ಭೂಪೇಶ್‌ ಬಾಘೇಲ್‌ ಅವರು ಆಸೀಮ್‌ ದಾಸ್ ಮೂಲಕ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಹಿನ್ನೆಲೆಯಲ್ಲಿ ದಾಸ್‌ ರನ್ನು ಇಡಿ ಬಂಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ಬದಲಿಸಿರುವ ದಾಸ್‌, ತಾನು ಯಾವತ್ತೂ ರಾಜಕಾರಣಿಗಳಿಗೆ ನಗದು ನೀಡಿಲ್ಲ. ನನ್ನನ್ನು ಬಲವಂತವಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಸಿಎಂ ಭಾಘೇಲ್‌ ವಿರುದ್ಧ ನಾನು ಯಾವುದೇ ಹಣದ ಆರೋಪ ಮಾಡಿಲ್ಲ. ಅಧಿಕಾರಿಗಳು ಇಂಗ್ಲಿಷ್‌ನಲ್ಲಿ ಬರೆಯಲಾದ ಹೇಳಿಕೆಯೊಂದರಲ್ಲಿ ನನ್ನ ಸಹಿ ಪಡೆದಿದ್ದಾರೆ. ನನಗೆ ಇಂಗ್ಲಿಷ್‌ ಬರುವುದಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಈ ಆಕ್ರಮ ಆ್ಯಪ್ ನ ಹಿಂದಿನ ವ್ಯಕ್ತಿ ಶುಭಂ ಸೋನಿ ತನ್ನ ಬಾಲ್ಯದ ಗೆಳೆಯ, ಆತನ ಒತ್ತಾಯದ ಮೇರೆಗೆ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎರಡು ಬಾರಿ ದುಬೈಗೆ ಭೇಟಿ ನೀಡಿದ್ದಾಗಿ ಆತ ಹೇಳಿದ್ದಾನೆ.

ಸೋನಿಗೆ ಛತ್ತೀಸಗಢದಲ್ಲಿ ನಿರ್ಮಾಣ ಕ್ಷೇತ್ರದ ವ್ಯವಹಾರ ನಡೆಸುವ ಆಸಕ್ತಿಯಿತ್ತು. ಅದಕ್ಕಾಗಿ ಕೆಲಸ ಮಾಡುವಂತೆ ತನ್ನನ್ನು ಕೇಳಿದ್ದ ಹಾಗೂ ಹಣಕಾಸಿನ ವ್ಯವಸ್ಥೆಯ ಬಗ್ಗೆಯೂ ಆಶ್ವಾಸನೆ ನೀಡಿದ್ದ ಎಂದು ಸೋನಿ ತನ್ನ ಪತ್ರದಲ್ಲಿ ಹೇಳಿದ್ದಾನೆ.

“ನಾನು ರಾಯಪುರ್ ವಿಮಾನ ನಿಲ್ದಾಣ ತಲುಪಿದಾಗ, ನನಗೆ ಕಾರೊಂದರಲ್ಲಿ ವಿಐಪಿ ರಸ್ತೆಯಲ್ಲಿರುವ ಹೋಟೆಲ್‌ಗೆ ಹೋಗುವಂತೆ ತಿಳಿಸಲಾಗಿತ್ತು. ಕಾರನ್ನು ಒಂದು ನಿರ್ದಿಷ್ಟ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚಿಸಲಾಯಿತು ಅಲ್ಲಿ ಒಬ್ಬ ವ್ಯಕ್ತಿ ನಗದು ತುಂಬಿದ ಚೀಲಗಳನ್ನು ಕಾರಿನಲ್ಲಿರಿಸಿರಿಸಿದ್ದಾರೆ, ಹೋಟೆಲ್ ಕೊಠಡಿಗೆ ತೆರಳುವಂತೆ ನನಗೆ ನಂತರ ಫೋನ್ ಮೂಲಕ ಸೂಚಿಸಲಾಯಿತು.

ಸ್ವಲ್ಪ ಹೊತ್ತಿನಲ್ಲಿ ಈಡಿ ಅಧಿಕಾರಿಗಳು ನನ್ನ ಕೊಠಡಿಗೆ ಬಂದು ನನ್ನನ್ನು ಕರೆದುಕೊಂಡು ಹೋದರು. ನನ್ನನ್ನು ಸಿಲುಕಿಸಲಾಗಿದೆ ಎಂದು ನಂತರ ನನಗೆ ತಿಳಿಯಿತು. ನಾನು ಯಾರಿಗೂ ಹಣಕಾಸಿನ ಸಹಾಯ ಮಾಡಿಲ್ಲ ಅಥವಾ ಯಾವುದೇ ರಾಜಕೀಯ ಮುಖಂಡರು ಅಥವಾ ಕಾರ್ಯಕರ್ತರಿಗೆ ಹಣ ನೀಡಿಲ್ಲ” ಎಂದು ದಾಸ್ ತನ್ನ ಪತ್ರದಲ್ಲಿ ತಿಳಿಸಿದ್ದಾನೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago