Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಛತ್ತೀಸ್‌ಗಢ ಚುನಾವಣೆ: ʼಮೋದಿ ಕಿ ಗ್ಯಾರಂಟಿ 2023ʼ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ರಾಯಪುರ : ಮುಂಬರುವ ಛತ್ತೀಸ್ ಗಢ  ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಸರ್ಕಾರ ಬಂದರೆ ಮುಂದಿನ ಐದು ವರ್ಷಗಳಲ್ಲಿ ಛತ್ತೀಸ್‌ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ಛತ್ತೀಸ್‌ಗಢದ ಜನರಿಗೆ ಬಿಜೆಪಿ ನೀಡಿರುವ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ ಶಾ, “ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ಉನ್ನತಿ ಯೋಜನೆಯನ್ನು ಪ್ರಾರಂಭಿ ಸಲಾಗುವುದು, ಇದರ ಭಾಗವಾಗಿ ರೂ. 3,100ರ ದರಲಲ್ಲಿ  21 ಕ್ವಿಂಟಾಲ್ ಅಥವಾ ಎಕರೆ ಭತ್ತವನ್ನು  ಖರೀದಿಸುತ್ತೇವೆ. ಖರೀದಿಯಿಂದ ಸಂಗ್ರಹಿಸಿದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.

“ಸರ್ಕಾರಿ ಕಚೇರಿಗಳಲ್ಲಿ ಖಾಯಿಯಿರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು,  ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಗಳನ್ನು ನೀಡಲಾಗುವುದು,  ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಾಗೂ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ ನಿರ್ಧರಿಸಿದ್ದೇವೆ. ಭೂರಹಿತ ರೈತರಿಗೆ ವಾರ್ಷಿಕ 10,000 ರೂ ಅನುದಾನ ನೀಡುತ್ತೇವೆ ಮತ್ತು ರಾಜ್ಯಾದ್ಯಂತ 500 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಅವರು ಹೇಳಿದರು.

https://x.com/ANI/status/1720387174439571919?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ