Mysore
19
overcast clouds
Light
Dark

ದೆಹಲಿ ಸಿಎಂ ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ: ತಿಹಾರ್‌ ಜೈಲಿಗೆ ಶಿಫ್ಟ್!

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ರೋಸ್‌ ಅವೆನ್ಯೂ ಕೋರ್ಟ್‌ ಇಂದು (ಏ.೧) ಮತ್ತೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ  ವಿಧಿಸಿದೆ.

ಕೇಜ್ರಿವಾಲ್‌ರನ್ನು ತಿಹಾರ್‌ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್‌ ಆದೇಶಿಸಿದ್ದು, ಇದರಂತೆ ತಿಹಾರ್‌ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರ ವಾದದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್‌ ಅವರನ್ನು ಏಪ್ರಿಲ್‌ 15 ರವರೆಗೆ ನ್ಯಾಯಾಂಗ ಬಂಧವನ್ನು ಮುಂದುವರೆಸುವಂತೆ  ಆದೇಶಿಸಿದೆ.