ತಿರುವನಂತಪುರಂ : ತಮಗೆ ದೈಹಿಕವಾಗಿ ಹಾನಿ ಮಾಡಲು ಪಿಣರಾಯಿ ವಿಜಯನ್ ಅವರು ಸಂಚು ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ಸಿಎಂ ಮೇಲೆ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯಪಾಲರು, ತಮಗೆ ದೈಹಿಕವಾಗಿ ಘಾಸಿ ಉಂಟುಮಾಡಲು ಸಂಘಟಿತ ಪ್ರಯತ್ನ ನಡೆಯುತ್ತಿದೆ. ತಮ್ಮನ್ನು ವ್ಯಕ್ತಿಗತವಾಗಿ ಗುರಿ ಮಾಡುವ ಉದ್ದೇಶಪೂರ್ವಕ ಕೃತ್ಯ ಇದಾಗಿದ್ದು, ಇದರಲ್ಲಿ ಸ್ವತಃ ಸಿಎಂ ಪಿಣರಾಯಿ ವಿಜಯನ್ ಭಾಗಿಯಾಗಿರುವುದನ್ನು ಇದು ಸೂಚಿಸುತ್ತದೆ ಎಂದು ಅವರು ದೂರಿದರು.
ಆಡಳಿತಾರೂಢ ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕ, ಎಸ್‌ಎಫ್‌ಐ (ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ) ಸದಸ್ಯರ ನಡುವಿನ ಗುಂಪು ಘರ್ಷಣೆ ವೇಳೆ, ಎರಡು ಗುಂಪುಗಳ ನಡುವೆ ರಾಜ್ಯಪಾಲರ ವಾಹನ ಸಿಲುಕಿಕೊಂಡಿತ್ತು. ರಾಜ್ಯಪಾಲರ ವಾಹನದ ಮೇಲೆ ಕೆಲವು ಕಾರ್ಯಕರ್ತರು ವ್ಯವಸ್ಥಿತವಾಗಿ ದಾಳಿ ನಡೆಸಿದ್ದರು ಎಂದು ಆರಿಫ್ ಖಾನ್ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನವದೆಹಲಿಗೆ ತೆರಳು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಇದು ಸದ್ಯ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಠಿಸಿದೆ.
ಸಿಎಂ ಕಾರ್ಯಕ್ರಮ ನಡೆಯುವ ವೇಳೆ ಬೇರೆ ಯಾವುದೇ ಪ್ರತಿಭಟನೆ ನಡೆಯಲು ಪೊಲೀಸರು ಬಿಡುತ್ತಾರೆಯೇ? ಸಿಎಂ ಕಾರಿನ ಬಳಿ ಯಾರಿಗಾದರು ಬರಲು ಪೊಲೀಸರು ಬಿಡುವರೇ? ಆದರೆ ನಮ್ಮ ಕಾರಿನ ಮೇಲೆ ದಾಳಿ ನಡೆದರೂ ಪೊಲೀಸರು ಸುಮ್ಮಿದ್ದದ್ದು ಯಾಕೆ? ನಾನು ಇದನ್ನು ಸ್ಪಷ್ಟವಾಗಿ ಹೇಳುತ್ತೇನೆ, ನನಗೆ ದೈಹಿಕವಾಗಿ ಘಾಸಿ ಮಾಡಲು ಸಂಚು ರೂಪಿಸಿರುವ ಸಿಎಂ ಜನರನ್ನು ಕಳುಹಿಸಿದ್ದಾರೆ. ತಮ್ಮ ಕಾರಿನ ಮೇಲಿನ ದಾಳಿ ಕೇರಳದಲ್ಲಿ ಪ್ರಜಾಪ್ರಭುತ್ವ ಕುಸಿತಕ್ಕೆ ಕಾರಣವಾಗಬಹುದು ಮತ್ತು ರಾಜಕೀಯ ಬಿನ್ನಾಭಿಪ್ರಾಯಗಳು ದೈಹಿಕ ದ್ವೇಷಕ್ಕೆ ಪುಷ್ಠಿ ನೀಡಬಹುದಾಗಿದೆ ಎಂದು ದೂರಿದ್ದಾರೆ.
ಒಂದು ನಿರ್ದಿಷ್ಟ ಜಾಗದಲ್ಲಿ ರಾಜ್ಯಪಾಲ ಖಾನ್ ಅವರ ವಾಹನಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಸಂಘಟನೆಯ ಏಳು ಮಂದಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…