ನವದೆಹಲಿ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ಜರುಗಿತು. ಹಿರಿಯ ನಾಯಕ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸಭೆ ಬಳಿಕ ಮಾತನಾಡಿದ ಪಿ. ಚಿದಂಬರಂ, ಇದು ಪ್ರಣಾಳಿಕೆ ಸಮಿತಿಯ ಮೊದಲ ಸಭೆ. ಮುಂದಿನ ವಾರ ಮತ್ತೆ ಭೇಟಿಯಾಗಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಯಾವುದನ್ನೂ ನಿರ್ಧರಿಸಲಾಗಿಲ್ಲ. ಸಭೆಯಲ್ಲಿ ಪ್ರಾಥಮಿಕ ಆಲೋಚನೆಗಳು, ಚಿಂತನೆಗಳ ವಿನಿಮಯವಾಯಿತು ಹಾಗೂ ಪ್ರಣಾಳಿಕೆ ಕರಡನ್ನು ಹೇಗೆ ಸಿದ್ಧಪಡಿಸಬೇಕು ಎಂಬುದರ ಕುರಿತು ಚರ್ಚೆ ನಡೆಯಿತು ಎಂದು ತಿಳಿಸಿದರು.
ಕಾಂಗ್ರೆಸ್ ಸಂಸದ ಶಶಿ ತರೂರ್ ಮಾತನಾಡಿ, ಏನೂ ನಿರ್ಧರವಾಗಿಲ್ಲ. ನಾವು ಅತ್ಯುತ್ತಮ ಪ್ರಣಾಳಿಕೆ ರೂಪಿಸುವ ವಿಶ್ವಾಸವಿದೆ. ಜನರು ಮಾತನಾಡುವ ಪ್ರಣಾಳಿಕೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ಸಭೆ ಜನವರಿ 11 ರಂದು ವರ್ಚುಯಲ್ ನಲ್ಲಿ ನಡೆಯಲಿದೆ.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…