ರಾಷ್ಟ್ರೀಯ

ಅಮಿತ್ ಶಾ, ಹಿಮಂತ ಬಿಸ್ವ ಶರ್ಮಾ ವಿರುದ್ಧ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್‌ ದೂರು

ನವದೆಹಲಿ : ಹಿರಿಯ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರ ನಿಯೋಗವೊಂದು ಬುಧವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮತ್ತು ಇತರ ಚುನಾವಣಾಧಿಕಾರಿಗಳನ್ನು ಭೇಟಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ದೂರುಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಈ ಬಿಜೆಪಿ ನಾಯಕರು ವಿಭಜನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಲ್ಮಾನ್‌ ಖುರ್ಷಿದ್‌, ಮಾಣಿಕ್‌ರಾವ್‌ ಠಾಕ್ರೆ, ರೇವನಾಥ್‌ ರೆಡ್ಡಿ, ಉತ್ತಮ್‌ ಕುಮಾರ್‌ ರೆಡ್ಡಿ, ಭಟ್ಟಿ ವಿಕ್ರಮಾರ್ಕ ಮುಂತಾದ ಹಿರಿಯ ಕಾಂಗ್ರೆಸ್‌ ನಾಯಕರು ನಿಯೋಗದಲ್ಲಿದ್ದರು.

“ಭೂಪೇಶ್‌ ಬಘೇಲ್‌ ಸರ್ಕಾರವು ಓಲೈಕೆ ರಾಜಕಾರಣ ಮತ್ತು ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ, ಛತ್ತೀಸಗಢದ ಸರ್ಕಾರ ಪುತ್ರ ಭುನೇಶ್ವರ್‌ ಸಾಹೂವನ್ನು ಹತ್ಯೆ ಮಾಡಿಸಿದೆ,” ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದೇ ಅಲ್ಲದೆ “ಬಿಜೆಪಿಯು ಭುವನೇಶ್ವರ್‌ ಸಾಹೂ ಹಂತಕರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತದೆ ಮತ್ತು ಅವರ ಗೌರವಾರ್ಥ ಅವರ ತಂದೆ ಈಶ್ವರ್‌ ಸಾಹೂ ಅನ್ನು ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದೆ,” ಎಂದು ಅಮಿತ್ ಶಾ ಹೇಳಿದ್ಧಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಗೃಹ ಸಚಿವರ ಹೇಳಿಕೆಯು ಐಪಿಸಿ ಹಾಗೂ ಜನ ಪ್ರತಿನಿಧಿತ್ವ ಕಾಯಿದೆ 1951 ಇದರ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಕಾಂಗ್ರೆಸ್‌ ನಾಯಕ ಮುಹಮ್ಮದ್‌ ಅಕ್ಬರ್‌ ವಿರುದ್ಧದ ಪ್ರಚಾರದಲ್ಲಿ “ಒಬ್ಬ ಅಕ್ಬರ್‌ ಒಂದು ಜಾಗಕ್ಕೆ ಬಂದರೆ, ಆತ 100 ಅಕ್ಬರರನ್ನು ಕರೆಯುತ್ತಾನೆ. ಆದ್ದರಿಂದ ಅವರನ್ನು ಆದಷ್ಟು ಬೇಗ ವಾಪಸ್‌ ಕಳಿಸಿ, ಇಲ್ಲದೇ ಹೋದಲ್ಲಿ ಮಾತೆ ಕೌಶಲ್ಯಳ ಭೂಮಿ ಅಪವಿತ್ರವಾಗಲಿದೆ,” ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಹೇಳಿದೆ.

ಛತ್ತೀಸಗಢ ಸರ್ಕಾರವು ಆದಿವಾಸಿಗಳಿಗೆ ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ಪ್ರತಿದಿನ ಪ್ರೇರೇಪಿಸುತ್ತಿದೆ ಎಂದು ಸರ್ಮ ಆರೋಪಿಸಿದ್ದಾರೆ ಎಂದೂ ಕಾಂಗ್ರೆಸ್‌ ದೂರಿನಲ್ಲಿ ಹೇಳಿದೆ ಹಾಗೂ ಸಿಎಂ ಹೇಳಿಕೆಯು ಒಂದು ಸಮುದಾಯವನ್ನು ಇನ್ನೊಂದು ಸಮುದಾಯಕ್ಕೆದುರಾಗಿ ಎತ್ತಿ ಕಟ್ಟುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದೆ.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

9 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago