Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಭಾರತ್ ಜೋಡೋ ಯಾತ್ರೆ 2.0ಗೆ ಕಾಂಗ್ರೆಸ್‌ ಸಿದ್ಧತೆ!

ನವದೆಹಲಿ:  2024ರ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ 2 ನೇ ಹಂತದ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಜನವರಿಯಿಂದ ಆರಂಭಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯಾತ್ರೆಯ ನೇತೃತ್ವ ವಹಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಭಾರತ್ ಜೋಡೋ ಯಾತ್ರೆಯ 2.0 ಆವೃತ್ತಿಯು ಹೈಬ್ರಿಡ್ ಮೋಡ್ ನಲ್ಲಿರಲಿದೆ. ಯಾತ್ರೆಯಲ್ಲಿ, ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಮೂಲಗಳ ಪ್ರಕಾರ, ಯಾತ್ರೆಗಾಗಿ ಪ್ರಸ್ತುತ ಎರಡು ಸಂಭಾವ್ಯ ಮಾರ್ಗಗಳು ಪರಿಗಣನೆಯಲ್ಲಿವೆ. ಅನುಮೋದನೆ ದೊರೆತರೆ, ಇದು ಈಶಾನ್ಯ ರಾಜ್ಯದಿಂದ ಪ್ರಾರಂಭವಾಗಲಿದೆ. ಯಾತ್ರೆಯ ಹೊಸ ಆವೃತ್ತಿಯು ನಿರ್ದಿಷ್ಟವಾಗಿ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಡಿಸೆಂಬರ್ 21 ರಂದು ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಯಾತ್ರೆಯ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಭಾರತ್ ಜೋಡೋ ಯಾತ್ರೆಯ ಮೊದಲ ಹಂತ ಸೆಪ್ಟೆಂಬರ್ 7, 2022 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು ಮತ್ತು ಸುಮಾರು 4,080 ಕಿ.ಮೀ ದೂರವನ್ನು ಕ್ರಮಿಸಿತು.

2023 ರ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆ ಕೊನೆಗೊಂಡಿತು. ಈ ಯಾತ್ರೆಯು 126 ದಿನಗಳಲ್ಲಿ 12 ರಾಜ್ಯಗಳ 75 ಜಿಲ್ಲೆಗಳನ್ನು ಕ್ರಮಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ