ರಾಷ್ಟ್ರೀಯ

ಕೇಂದ್ರ ಸರ್ಕಾರದ ವಿರುದ್ಧ ʼಕಪ್ಪು ಪತ್ರʼ ಬಿಡುಗಡೆ ಮಾಡಿದ ಖರ್ಗೆ

ನವದೆಹಲಿ: ತೆರಿಗೆ ಹಣ ಹಂಚಿಕೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಆರೋಪ – ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಕೇಂದ್ರ ಸರ್ಕಾರದಿಂದ ತೆರಿಗೆ ಅನುದಾನ ಬಂದಿಲ್ಲ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ಎಐಸಿಸಿ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ಕಪ್ಪು ಪತ್ರ ಬಿಡುಗಡೆಗೊಳಿಸಿದ್ದಾರೆ.

ಬಜೆಟ್‌ ಅಧಿವೇಶನದಲ್ಲಿ ತಮ್ಮ ಸರ್ಕಾರದ ಹತ್ತು ವರ್ಷಗಳ ಅವಧಿಯ ಸಾಧನೆಗಳನ್ನು ಕಾಂಗ್ರೆಸ್‌ ಸರ್ಕಾರದ ಹತ್ತು ವರ್ಷಗಳ ಆಡಳಿತಾವಧಿಯಲ್ಲಾದ ಸಾಧನೆಗಳ ಜತೆ ಹೋಲಿಸಿ ಶ್ವೇತ ಪತ್ರ ಬಿಡುಗಡೆ ಮಾಡುವುದಾಗಿ ಬಿಜೆಪಿ ತಿಳಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ʼಹತ್ತು ವರ್ಷಗಳ ಅನ್ಯಾಯ ಕಾಲʼ ಎಂಬ ಹೆಸರಿನ ಅಡಿಯಲ್ಲಿ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ʼಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ ಅದನ್ನು ರಾಜ್ಯಗಳು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತಿದೆʼ ಎಂದು ಕಪ್ಪು ಪತ್ರ ಬಿಡುಗಡೆ ವೇಳೆ ಖರ್ಗೆ ಹೇಳಿದರು.

ಶ್ವೇತಪತ್ರ ಬಿಡುಗಡೆ ಮಾಡುವುದರ ಕುರಿತು ಮಾತನಾಡಿದ ಖರ್ಗೆ ಸದ್ಯ ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್‌ ಇತಿಹಾಸ ಕೆದಕುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಹೇಳಿದರು.

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago