ರಾಷ್ಟ್ರೀಯ

ಲೋಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸೀಟ್‌ ಗೆಲ್ಲುವುದು ಅನಮಾನ: ಮಮತಾ ಬ್ಯಾನರ್ಜಿ!

ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ “40 ಸ್ಥಾನಗಳನ್ನು” ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.

“ಕಾಂಗ್ರೆಸ್ ದೇಶಾದ್ಯಂತ 300 ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಆದರೆ ಅವರು ಆ ಬಗ್ಗೆ ಗಮನ ಹರಿಸುವ ಬದಲು ಈಗ ರಾಜ್ಯದಲ್ಲಿ ಮುಸ್ಲಿಂ ಮತದಾರರನ್ನು ಪ್ರಚೋದಿಸಲು ಬಂದಿದ್ದಾರೆ. ಅವರು ಅವರು 300 ಮಂದಿ ಸ್ಪರ್ಧಿಸಿದರೂ 40 ಸ್ಥಾನಗಳನ್ನು ಪಡೆಯುತ್ತಾರೆಯೇ ಎಂದು ನನಗೆ ಅನುಮಾನವಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸಂಚರಿಸಿದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಟೀಕಿಸಿದ ಬ್ಯಾನರ್ಜಿ, ರಾಜ್ಯಕ್ಕೆ ಬಂದಿರುವ “ವಲಸೆ ಹಕ್ಕಿಗಳಿಗೆ” “ಕೇವಲ ಫೋಟೋಗೆ ಅವಕಾಶ” ನೀಡುತ್ತಿದೆ ಎಂದಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷವು ಸಿದ್ಧವಾಗಿದೆ. ಆದರೆ ನಮ್ಮ ಪ್ರಸ್ತಾಪವನ್ನು ಅತ್ಯಂತ ಹಳೆಯ ಪಕ್ಷ ನಿರಾಕರಿಸಿದೆ ಎಂದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago