ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ “40 ಸ್ಥಾನಗಳನ್ನು” ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.
“ಕಾಂಗ್ರೆಸ್ ದೇಶಾದ್ಯಂತ 300 ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಆದರೆ ಅವರು ಆ ಬಗ್ಗೆ ಗಮನ ಹರಿಸುವ ಬದಲು ಈಗ ರಾಜ್ಯದಲ್ಲಿ ಮುಸ್ಲಿಂ ಮತದಾರರನ್ನು ಪ್ರಚೋದಿಸಲು ಬಂದಿದ್ದಾರೆ. ಅವರು ಅವರು 300 ಮಂದಿ ಸ್ಪರ್ಧಿಸಿದರೂ 40 ಸ್ಥಾನಗಳನ್ನು ಪಡೆಯುತ್ತಾರೆಯೇ ಎಂದು ನನಗೆ ಅನುಮಾನವಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸಂಚರಿಸಿದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಟೀಕಿಸಿದ ಬ್ಯಾನರ್ಜಿ, ರಾಜ್ಯಕ್ಕೆ ಬಂದಿರುವ “ವಲಸೆ ಹಕ್ಕಿಗಳಿಗೆ” “ಕೇವಲ ಫೋಟೋಗೆ ಅವಕಾಶ” ನೀಡುತ್ತಿದೆ ಎಂದಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷವು ಸಿದ್ಧವಾಗಿದೆ. ಆದರೆ ನಮ್ಮ ಪ್ರಸ್ತಾಪವನ್ನು ಅತ್ಯಂತ ಹಳೆಯ ಪಕ್ಷ ನಿರಾಕರಿಸಿದೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…