ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ.
ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ.
4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮಣಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭೆ ಚುನಾವಣೆಯಲ್ಲಿ ಪ್ರಚಾರದ ಅಭಿಯಾನ, ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ -2 ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…