Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಭಾರತೀಯ ಸೇವೆಯಲ್ಲಿ ತೃತೀಯ ಲಿಂಗಿಗಳ ನೇಮಕಕ್ಕೆ ಚಿಂತನೆ

ನವದೆಹಲಿ : ಭಾರತೀಯ ಸೇನೆಯಲ್ಲಿ ತೃತೀಯ ಲಿಂಗಿಗಳನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದ್ದು ಇದರ ಅಧ್ಯಾಯದಕ್ಕಾಗಿ ತಂಡವೊಂದನ್ನು ರಚಿಸಲಾಗಿದೆ.

ಸೇನೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಅಮೆರಿಕ, ಲಂಡನ್, ಬ್ರಿಟನ್ 19 ದೇಶಗಳ ಸೇನೆಯಲ್ಲಿ ತೃತೀಯಲಿಂಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಇದೀಗ ಭಾರತವೂ ಕೂಡ ತೃತೀಯ ಲಿಂಗಿಗಳ ನೇಮಕಕ್ಕೆ ಆಸಕ್ತಿ ತೋರಿದೆ. ಅನೇಕ ತೃತೀಯ ಲಿಂಗಿಗಳು ಸರ್ಕಾರಿ ಹಾಗೂ ಸರ್ಕಾರೇತರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರಿಗೆ ಸೇನೆಯಲ್ಲೂ ಕೂಡ ಕರ್ತವ್ಯ ನಿರ್ವಹಿಸಲು ಅವಕಾಶ ಕೊಡಲು ಚಿಂತನೆ ನಡೆಸಲಾಗುತ್ತಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

1974ರಲ್ಲಿ ಇಡೀ ವಿಶ್ವದಲ್ಲೇ ಮೊದಲ ಬಾರಿಗೆ ನೆದರ್ಲ್ಯಾಂಡ್ ನಲ್ಲಿ ತೃತೀಯ ಲಿಂಗಿಯನ್ನು ಸೇನೆಗೆ ನೇಮಕ ಮಾಡಿಕೊಳ್ಳಲಾಗಿತ್ತು. ಇದು ವಿಶ್ವಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!