ರಾಷ್ಟ್ರೀಯ

ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್‌:  ಭಾರತ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಲ್ಡೀವ್ಸ್‌ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಾಲ್ಡೀವ್ಸ್‌ ಸರ್ಕಾರ ಮರಿಯಮ್‌ ಶಿಯುನಾ, ಮಲ್ಶಾ ಮತ್ತು ಹಸನ್‌ ಜಿಹಾನ್‌ ಮೂವರು ಸಚಿವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಲೇವಡಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಭಾರತ ಈ ವಿಷಯವನ್ನು ಅಧಿಕೃತವಾಗಿ ಮಾಲ್ಡೀವ್ಸ್‌ ಸರ್ಕಾರಕ್ಕೆ ತಿಳಿಸಿತ್ತು. ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿರುವ ಮಾಲ್ಡೀವ್ಸ್‌ ಸರ್ಕಾರ ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವೆ ಮರಿಯಮ್‌ ಶಿಯುನಾ, ಸಾರಿಗೆ ಮತ್ತು ನಾಗರೀಕ ವಿಮಾನಯಾನ ಸಚಿವಾಲಯದ ಉಪ ಸಚಿವ ಹಸನ್‌ ಜಿಹಾನ್‌ ಮತ್ತು ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವ ಮಲ್ಶಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾಹಿದ್‌ ರಮೀಜ್‌: ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸವನ್ನು ಲೇವಡಿ ಮಾಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮಯಿಝು ಪಕ್ಷದ ಸದಸ್ಯ ಜಾಹಿದ್‌ ರಮೀಜ್‌ ಅವರು, ಸಾಮಾಜಿಕ ಮಾಧ್ಯಮ ಬಳಕೆದಾರರು ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಹೋಲಿಸುತ್ತಾರೆ. ಮಾಲ್ಡೀವ್ಸ್‌ ಸುಂದರವಾದ ಕಡಲ ತೀರಗಳಿಗೆ ಹೆಸರುವಾಸಿಯಾದ ಪ್ರವಾಸಿ ತಾಣವಾಗಿದೆ ಎಂದಿದ್ದರು.

ಮತ್ತು ಜನವರಿ ೫ ರಂದು ಮತ್ತೊಂದು ಟ್ವೀಟ್‌ ಮಾಡಿದ್ದ ಅವರು, ಭಾರತ ನಮ್ಮೊಂದಿಗೆ ಎಂದಿಗೂ ಸಮಾನವಾಗಲು ಸಾಧ್ಯವಿಲ್ಲ. ಮಾಲ್ಡೀವ್ಸ್‌ನಂತೆ ಸ್ವಚ್ಛತೆಯನ್ನು ಕಾಪಾಡಲು, ಪ್ರವಾಸಿಗರಿಗೆ ಒದಗಿಸುವ ಉತ್ತಮ ಸೇವೆಯನ್ನು ಭಾರತ ಹೇಗೆ ಒದಗಿಸುತ್ತದೆ? ಅವರ ಕೊಠಡಿಗಳಲ್ಲಿನ ವಾಸನೆಯೇ ಅವರಿಗೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಬರೆದುಕೊಂಡಿದ್ದರು.

ಜೊತೆಗೆ ಮಾಲ್ಡೀವ್ಸ್‌ನ ಸಚಿವ ಶಿಯುನಾ ಕೂಡಾ ಪ್ರಧಾನಿ ವಿರುದ್ಧ ವಿವಾದಾತ್ಮಕ ಪೋಸ್ಟ್‌ ಹಾಕಿದ್ದರು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ಮತ್ತು ಭಾರತ #Boycottmaldives ಅಭಿಯಾನ ನಡೆಸಿದ್ದರು. ಈ ಹಿನ್ನಲೆ ಶಿಯುನಾ ತಮ್ಮ ಪೋಸ್ಟ್‌ ಡಿಲೀಟ್‌ ಮಾಡಿದ್ದರು.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago