ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಿಸಲು ಪಣತೊಟ್ಟ ಜಾಗದಲ್ಲಿಯೇ ನಾವಿಂದು ರಾಮಮಂದಿರ ಉದ್ಘಾಟನೆ ಮಾಡಿದ್ದೇವೆ. ರಾಮಲಲ್ಲಾ ಸ್ಥಾಪನೆ ರಾಮರಾಜ್ಯದ ಹೆಗ್ಗುರುತಾಗಿದ್ದು, ಇಲ್ಲಿ ಸದಾ ರಾಮನಾಮ ಸ್ಮರಣೆ ನಡೆಯಲಿದೆ ಎಂದರು.
500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಇದು ದೇಶದ ಭಾವನಾತ್ಮಕ ಘಳಿಗೆಯಾಗಿದೆ. ಈ ದಿನ ದೇಶದ ಪ್ರತಿಯೊಂದು ನಗರ ಮತ್ತು ಹಳ್ಳಿಗಳು ಸಹಾ ಅಯೋಧ್ಯೆಯಾಗಿ ಬದಲಾಗಿದೆ, ಎಲ್ಲರೂ ಸಂತುಷ್ಟರಾಗಿದ್ದಾರೆ ಎಂದು ಯೋಗಿ ನುಡಿದರು.
ದೇಶದೆಲ್ಲೆಡೆ ರಾಮನ ಛಾಯೆ ಆವರಿಸಿದೆ. ನಾವು ತೇತ್ರಾಯುಗದಲ್ಲಿರುವಂತೆ ಭಾಸವಾಗುತ್ತಿದೆ. ಮಂದಿರದ ಕನಸು ನನಸಾಗಲು ಕಾರಣರಾದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು.
ಇದೇ ವೇಳೆ ಬಾಬ್ರಿ ಮಸೀದಿ ಇದ್ದ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಈ ಹಿಂದೆ ನಡೆದ ಹೋರಾಟಗಳಲ್ಲಿ ಬಳಕೆಯಾದ ಮಂದಿರ್ ವಹಿ ಬನಾಯೇಂಗೆ ಘೋಷಣೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದರು.
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…