Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಚಾಂಗ್‌ ಚಂಡಮಾರುತ: ತಮಿಳುನಾಡಿನಲ್ಲಿ ಇಬ್ಬರು ಬಲಿ

ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.

ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.

ಭಾರಿ ಮಳೆ ಹಿನ್ನಲೆ ಚೆನ್ನೈ ಏರ್​ಪೋರ್ಟ್​​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್​ಪ್ರೆಸ್​​ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್​ಪೋರ್ಟ್​ನಲ್ಲಿ ಉಳಿಯುವಂತಾಗಿದೆ. 

ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ