ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.
ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.
ಭಾರಿ ಮಳೆ ಹಿನ್ನಲೆ ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಉಳಿಯುವಂತಾಗಿದೆ.
ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…