ನವದೆಹಲಿ : ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿದೆ. ಹಾಗೂ ಮಾಸ್ಕ್ ಕಡ್ಡಾಯದ ನಿಯಮವನ್ನು ಮೀರಿದರೆ ಅಂತವರಿಗೆ 500 ರೂಪಾಯಿ ದಂಡವನ್ನು ವಿಧಿಸಿದೆ. ಬುಧವಾರದಂದು ಅತೀಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.
ಬುಧವಾರದಂದು ಬಂದ ಕೋವಿಡ್ ವರದಿಯಲ್ಲಿ 8 ಸಾವಿಗಳು ಸಂಭವಿಸಿರುವ ಬಗ್ಗೆ ಮಾಹಿತಿ ಬಂದಿದ್ದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಪಾಸಿಟಿವಿಟಿಯ ದರವೂ ಕೂಡ 17.83 ರಷ್ಟಿದೆ ಎಂದು ಮಾಹಿತಿಗಳು ಬಂದಿದೆ.