ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರಿಗೆ ಕೇಂದ್ರ ಚುನಾವಣಾ ಆಯೋಗ ಶೋಕಸ್ ನೋಟಿಸ್ ನೀಡಿದೆ.
ಈ ಸಂಬಂಧ ಬಿಜೆಪಿ ನಾಯಕರಾದ ಹರ್ದಿಪ್ ಸಿಂಗ್ ಪುರಿ, ಅನಿಲ್ ಬಲುನಿ, ಓಂ ಪಠಾಕ್ ಅವರು, ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಿದೆ ಎಂದು ಪ್ರಿಯಾಂಕ ಗಾಂಧಿ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪ್ರಿಯಾಂಕ ಗಾಂಧಿಯವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.
ಮಧ್ಯಪ್ರದೇಶದ ಸಾನ್ವೇರ್ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಲಿಯಲ್ಲಿ ಪ್ರಿಯಾಂಕ ಗಾಂಧಿ, ನರೇಂದ್ರ ಮೋದಿ ಅವರು ಸಾರ್ವಜನಿಕ ವಲಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಅನ್ನು ಅವರ ಕೈಗಾರಿಕೋದ್ಯಮಿ ಸ್ನೇಹಿತನಿಗೆ ನೀಡಿದ್ದಾರೆ, ಬಹಿರಂಗವಾಗಿ ಆರೋಪ ಮಾಡಿದ್ದರು.