ರಾಷ್ಟ್ರೀಯ

ಪಕ್ಷದ ಚೌಕಟ್ಟು ಮೀರದಿರಿ, ಶಿಸ್ತು ಉಲ್ಲಂಘಿಸಿದರೆ ಕ್ರಮ: ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಚೌಕಟ್ಟು ಮೀರದಿರಿ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು ಬಾಹ್ಯವಾಗಿ ಚರ್ಚೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೆಬೆಲ್ ಶಾಸಕರಿಗೆ ಹಾಗೂ ಸಚಿವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ತುರ್ತು ಸಭೆಯ ಬಳಿಕ ಮಾತನಾಡಿದ ಅವರು, ” ಶಾಸಕರು ಸಚುವರು ತಮ್ಮ ಇಲಾಖೆ, ಕ್ಷೇತ್ರ ಹಾಗೂ ಅಭಿವೃದ್ಧಿ ಕೆಲಸ ಕಾರ್ಯಗಳತ್ತ ಗಮನ ಹರಿಸಲಿ, ಬದಲಾಗಿ ಪಕ್ಷದ ಚೌಕಟ್ಟು ಉಲ್ಲಂಘನೆ ಮಾಡಿ‌ ಹೇಳಿಕೆಗಳನ್ನು ನೀಡಬಾರದು ” ಎಂದು‌ ಎಚ್ಚರಿಕೆ ನೀಡಿದರು.

ಏನೇ ಸಮಸ್ಯೆಯ ಇದ್ದರೂ ಹೈಕಮಾಂಡ್‌ ಸಂಪರ್ಕಿಸಿ

” ಏನೇ ಸಮಸ್ಯೆ ಇದ್ದರೂ ನನ್ನನ್ನು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಸಂಪರ್ಕ ಮಾಡಬಹುದು. ಬದಲಾಗಿ ಬಹಿರಂಗ ಹೇಳಿಕೆ‌‌ ನೀಡುವ ಹಾಗಿಲ್ಲ. ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಬೇಕು. ಅಭಿವೃದ್ಧಿ ವಿಚಾರವಾಗಿ ಅವರು ಹೆಚ್ಚು ಆದ್ಯತೆ ಕೊಡಲಿ.‌ಸಿಎಂ ಬದಲಾವಣೆ ವಿಚಾರವಾಗಿಯೂ ಯಾವುದೇ ಹೇಳಿಕೆ ನೀಡುವ ಹಾಗಿಲ್ಲ ” ಎಂದು‌ ಎಚ್ಚರಿಸಿದರು.

15 ದಿನಗಳಲ್ಲಿ ಕಾಂಗ್ರೆಸ್‌ ಸಂಭಾವ್ಯರ ಪಟ್ಟಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಲೋಕಸಭೆ ಚುನಾವಣೆಯಲ್ಲಿ ಜಯ ತಂದುಕೊಡಲಿದೆ. ‌ 15 ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಟ್ಟಿ ಮಾಡಲು ಸೂಚನೆ‌ ನೀಡಲಾಗಿದೆ. ಈ‌ ಬಾರಿ ಲೋಕಸಭೆಯಲ್ಲಿ 20 ಸ್ಥಾನ ಖಂಡಿತಾ ಗೆಲ್ಲುತ್ತೇವೆ ಹಾಗೂ 25+ ಪ್ರಯತ್ನ ಪಡುವ ಭರವಸೆಯನ್ನು ಸಿಎಂ‌ ಹಾಗೂ ಡಿಸಿಎಂ ನೀಡಿದ್ದಾರೆ ಎಂದರು.

ನಿಗಮ ಮಂಡಳಿ ಬಗ್ಗೆ ಚರ್ಚೆ

ಇಂದಿನ ಸಭೆಯಲ್ಲಿ‌ ನಿಗಮ ಮಂಡಳಿ ಮತ್ತು ಕಾರ್ಪೊರೇಷನ್ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆದಿದೆ. ನೇಮಕಾತಿಯಲ್ಲಿ‌ ಶಾಸಕರು ಹಾಗೂ ಕಾರ್ಯಕರ್ತರನ್ನೂ ಪರಿಗಣಿಸಲಾಗುವುದು.ಮಧ್ಯ ಪ್ರದೇಶ ಚುನಾವಣೆಯ‌ ಬಳಿಕ ಮತ್ತೆ ಈ ನಿಟ್ಟಿನಲ್ಲಿ ಚರ್ಚೆ ನಡೆಸುತ್ತೇವೆ ಎಂದರು.

ಮಧ್ಯಪ್ರದೇಶ ಚುನಾವಣೆ ಬಳಿಕ ನಿಗಮಮಂಡಳಿ ನೇಮಕಾತಿ

” ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17 ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದು ” ಹೇಳಿದರು.

ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ

ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, “ ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ. ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago