Mysore
25
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಹಣವಿಲ್ಲದ ಕಾರಣ ಚುನಾವಣೆಯಿಂದ ಹಿಂದೆ ಸರಿದೆ: ವಿತ್ತ ಸಚಿವೆ

ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ ತಿಳಿಸಿದ್ದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ, ನನ್ನ ಬಳಿ ಹಣವಿಲ್ಲದ ಕಾರಣ ನಾನು ಈ ಬಾರಿಯ ಲೋಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ವಿತ್ತ ಸಚಿವೆ ಸ್ಪಷ್ಟಪಡಿಸಿದ್ದಾರೆ.

 

Tags:
error: Content is protected !!