ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಗೆ ಸಂಬಂಧಿಸಿದ ಚರ್ಚೆಗಳು ಹಾಗೂ ಚಟುವಟಿಕೆಗಳು ಗರಿಗೆದರಿವೆ. ಅತ್ತ ಚುನಾವಣಾ ಆಯೋಗ ದೇಶದಲ್ಲಿ ಇರುವ ಒಟ್ಟು ಅರ್ಹ ಮತದಾರರ ಸಂಖ್ಯೆ ಎಷ್ಟು ಎಂಬ ಅಂಕಿಅಂಶವನ್ನು ಹಂಚಿಕೊಂಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶದ 96.88 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಚುನಾವಣಾ ಆಯೋಗ ನಿನ್ನೆ ( ಫೆಬ್ರವರಿ ) ತಿಳಿಸಿದೆ.
ಇನ್ನು ಕಳೆದ ಬಾರಿ ನಡೆದಿದ್ದ ಲೋಕಸಭೆ ಚುನಾವಣೆಯ ಬಳಿಕ ನೋಂದಾಯಿತ ಮತದಾರರಲ್ಲಿ ಶೇ.6ರಷ್ಟು ಏರಿಕೆಯಾಗಿದ್ದು, 18ರಿಂದ 29 ವರ್ಷದವರೆಗಿನ 2 ಕೋಟಿಗೂ ಹೆಚ್ಚು ನೂತನ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿಕೊಂಡಿದ್ದಾರೆ.
ಒಟ್ಟು 96,88,21,926 ಮತದಾರರು ದೇಶದಲ್ಲಿದ್ದು, ಈ ಪೈಕಿ 49,72,31,994 ಮಂದಿ ಪುರುಷ ಮತದಾರರಿದ್ದು, 47,15,41,888 ಮಂದಿ ಮಹಿಳಾ ಮತದಾರರಿದ್ದಾರೆ. 48,044 ಲೈಂಗಿಕ ಅಲ್ಪಸಂಖ್ಯಾತರೂ ಸಹ ಇದ್ದಾರೆ. 2,38,791 ಮತದಾರರು ನೂರು ವರ್ಷಗಳಿಗೂ ಅಧಿಕ ವಯಸ್ಸಿನವರಾಗಿದ್ದು, 88,35,449 ಮತದಾರರು ಅಂಗವಿಕಲರಾಗಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…