ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.
ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.
ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…