ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ ಕಾಂಗ್ರೆಸ್ ತೊಡಗಿದೆ’ ಎಂದು ವಾಗ್ದಾಳಿ ನಡೆಸಿದರು.
ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರವು ಮಹಾದೇವನ ಹೆಸರಿನಲ್ಲಿಯೂ ರಾಜ್ಯದ ಜನರನ್ನು ಶೋಷಿಸುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಹವಾಲಾ ಹಣವನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಬೆಳೆಸಿಕೊಳ್ಳುತ್ತಿದೆ. ಇದೀಗ ತಮ್ಮ ಭ್ರಷ್ಟಾಚಾರಕ್ಕೆ ‘ಮಹಾದೇವ’ನ ಹೆಸರನ್ನು ಬಿಟ್ಟಿಲ್ಲ. ರಾಜ್ಯವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
‘ದುಬೈ ಮೂಲದ ಬೆಟ್ಟಿಂಗ್ ಆ್ಯಪ್ ಪ್ರವರ್ತಕರ ಜತೆ ಕಾಂಗ್ರೆಸ್ ನಂಟು ಹೊಂದಿದೆ. ತನಿಖಾಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಭಯಗೊಂಡಿರುವ ಸಿಎಂ ಭೂಪೇಶ್ ಬಘೇಲ್ ಅವರೀಗ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಯಾವುದೇ ಯೋಜನೆಗಳ ಅನುಮೋದನೆಗೆ ರಾಜ್ಯ ಸರ್ಕಾರ 30 ಪರ್ಸೆಂಟ್ ಕಮಿಷನ್ ಬೇಡಿಕೆ ಒಡ್ಡುತ್ತಿದೆ. 80 ಕೋಟಿ ಬಡತನ ಪೀಡಿತ ಜನಸಂಖ್ಯೆಗೆ ‘ಉಚಿತ ಪಡಿತರ ಯೋಜನೆ’ಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ ಅವರು, ದೇಶದ ಏಕೈಕ ಜಾತಿ ಎಂದು ಬಡವರಿಗೆ ಒತ್ತು ನೀಡಿದರು.
ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಾವಿರಾರು ಬಡ ಕುಟುಂಬಗಳಿಗೆ ಶಾಶ್ವತ ಮನೆ, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕಗಳು ಮತ್ತು ಪ್ರತಿ ಮನೆಗೆ ನಲ್ಲಿ ನೀರು ಸರಬರಾಜು ಮಾಡಲಾಗುವುದು. ಬಡವರ ಕಲ್ಯಾಣದ ಅವರ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ, ಅತ್ಯಂತ ಪ್ರಮುಖವಾದ ಜಾತಿ ಬಡತನವಾಗಿದೆ ಮತ್ತು ಬಿಜೆಪಿಯ ನೀತಿಗಳು ಕಳೆದ ಐದು ವರ್ಷಗಳಲ್ಲಿ 13.50 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿವೆ. ಕಾಂಗ್ರೆಸ್ ಜಾತಿ ಆಧಾರಿತ ರಾಜಕೀಯದಲ್ಲಿ ತೊಡಗಿದೆ. ಬಿಜೆಪಿ ದಲಿತರು ಮತ್ತು ಒಬಿಸಿ ಸಮುದಾಯಕ್ಕೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ವ್ಯಾಪಕ ಪ್ರಾತಿನಿಧ್ಯ ಒದಗಿಸಿದೆ. ಕೇಂದ್ರ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯ ಒಬಿಸಿ ಮಂತ್ರಿಗಳು ಇದ್ದಾರೆ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…