ರಾಷ್ಟ್ರೀಯ

ಅಬಕಾರಿ ನೀತಿ ಪ್ರಕರಣ: ಮನೀಷ್‌ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಹಿರಿಯ ಆಪ್‌ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ನಿರಾಕರಿಸಿದೆ. ಇದರಿಂದ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ.

ಈ ಪ್ರಕರಣದಲ್ಲಿ ರೂ. 336 ಕೋಟಿ ಹಣದ ವ್ಯವಹಾರ ತಿಳಿದು ಬಂದಿರುವುದರಿಂದ ವಿಚಾರಣೆಯು ಆರರಿಂದ ಎಂಟು ತಿಂಗಳುಗಳೊಳಗೆ ಪೂರ್ಣಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಒಂದು ವೇಳೆ ಈ ಅವಧಿಯೊಳಗೆ ವಿಚಾರಣೆ ಪೂರ್ಣಗೊಳ್ಳದೇ ಇದ್ದರೆ ಸಿಸೋಡಿಯಾ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಅದೇ ಸಮಯ ತನಿಖಾ ಏಜನ್ಸಿಗಳು ಎಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.

andolanait

Recent Posts

ಕುವೈತ್‌ ಪ್ರವಾಸ: ಪ್ರಧಾನಿ ಮೋದಿಗೆ 20ನೇ ಅಂತರಾಷ್ಟ್ರೀಯ ಗೌರವ

ಕುವೈತ್‌/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌…

7 mins ago

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

12 mins ago

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

42 mins ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

2 hours ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

2 hours ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

2 hours ago