ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಹಿರಿಯ ಆಪ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನಿರಾಕರಿಸಿದೆ. ಇದರಿಂದ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ.
ಈ ಪ್ರಕರಣದಲ್ಲಿ ರೂ. 336 ಕೋಟಿ ಹಣದ ವ್ಯವಹಾರ ತಿಳಿದು ಬಂದಿರುವುದರಿಂದ ವಿಚಾರಣೆಯು ಆರರಿಂದ ಎಂಟು ತಿಂಗಳುಗಳೊಳಗೆ ಪೂರ್ಣಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ಒಂದು ವೇಳೆ ಈ ಅವಧಿಯೊಳಗೆ ವಿಚಾರಣೆ ಪೂರ್ಣಗೊಳ್ಳದೇ ಇದ್ದರೆ ಸಿಸೋಡಿಯಾ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ಅದೇ ಸಮಯ ತನಿಖಾ ಏಜನ್ಸಿಗಳು ಎಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಎಂ.ನಾರಾಯಣ ತಿ.ನರಸೀಪುರ: ನಾಲೆಗಳಿಗೆ ನೀರು ಹರಿಸದ ಕಾರಣ ಒಣಗುತ್ತಿರುವ ದ್ವಿದಳ ಧಾನ್ಯ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿ…
ದಾ.ರಾ.ಮಹೇಶ್ ವೀರನಹೊಸಹಳ್ಳಿ: ಸಿಹಿ ಗೆಣಸು ಬೆಳೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹನಗೂಡು…
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…