ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಸೂಚಿಸಿದೆ.
ಆದರೆ ವಿವರ ನೀಡಲು ಜೂನ್ 30 ರವರೆಗೆ ಗಡುವು ವಿಸ್ತರಿಸಬೇಕು ಎಂದು ಕೋರಿ ಎಸ್ ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಉನ್ನತ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) “ಪ್ರತಿ ಸಿಲೋ” ದಿಂದ ಮಾಹಿತಿಯನ್ನು ಮರುಪಡೆಯುವುದು ಮತ್ತು ಒಂದು ಸಿಲೋದ ಮಾಹಿತಿಯನ್ನು ಇನ್ನೊಂದಕ್ಕೆ ಹೊಂದಿಸುವ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.
ದಾನಿಗಳ ಗುರುತನ್ನು ಅನಾಮಧೇಯವಾಗಿ ಇಡುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಚುನಾವಣಾ ಬಾಂಡ್‌ಗಳನ್ನು “ಡಿಕೋಡಿಂಗ್” ಮಾಡುವುದು ಮತ್ತು ನೀಡಿದ ದೇಣಿಗೆಗಳಿಗೆ ದಾನಿಗಳನ್ನು ಹೊಂದಿಸುವುದು ಸಂಕೀರ್ಣ ಪ್ರಕ್ರಿಯೆಯಾಗಿದೆ. ಹೀಗಾಗಿ ಮಾಹಿತಿ ನೀಡಲು ಜೂನ್ 30ರ ವರೆಗೆ ಸಮಯ ನೀಡುವಂತೆ ಎಸ್ ಬಿಐ ಕೇಳಿಕೊಂಡಿದೆ.
ರಾಜಕೀಯ ಪಕ್ಷಗಳು ನಗದಾಗಿ ಪರಿವರ್ತಿಸಿಕೊಂಡ ಪ್ರತಿಯೊಂದು ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ನಗದಿನ ದಿನಾಂಕ, ಮುಖಬೆಲೆ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…