Mysore
15
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಖ್ಯಾತ ಹಿಂದುಸ್ತಾನಿ ಗಾಯಕಿ ಡಾ.ಪ್ರಭಾ ಆತ್ರೆ ನಿಧನ

ಪುಣೆ: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ ಹೃದಯಾಘಾತವಾಗಿದೆ.ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಬೆಳಿಗ್ಗೆ 5.30 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

 

ಅತ್ರೆ, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು.

1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!