ಪುಣೆ: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ ಹೃದಯಾಘಾತವಾಗಿದೆ.
ಅತ್ರೆ, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು.
1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿತ್ತು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…