ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಇತರ ರಾಜಕೀಯ ಪಕ್ಷಗಳೊಂದಿಗೆ ಸಂಭಾವ್ಯ ಮೈತ್ರಿಗಳಿಗೆ ಸಂಬಂಧಿಸಿದಂತೆ ಚರ್ಚೆಗಳನ್ನು ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.
ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ನೇತೃತ್ವದ ರಾಷ್ಟ್ರೀಯ ಮೈತ್ರಿ ಸಮಿತಿಯಲ್ಲಿ ಸದಸ್ಯರನ್ನಾಗಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಹಿರಿಯ ನಾಯಕ ಮೋಹನ್ ಪ್ರಕಾಶ ಅವರನ್ನು ನೇಮಕಗೊಳಿಸಲಾಗಿದೆ.
2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುವ ಮತ್ತು ಆ ಬಗ್ಗೆ ಚರ್ಚಿಸುವ ಹೊಣೆಯನ್ನು ಸಮಿತಿಗೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದವು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…