ರಾಷ್ಟ್ರೀಯ

ಲೋಕಸಭಾ ಚುನಾವಣೆ ಸಂಭಾವ್ಯ ಮೈತ್ರಿಗೆ ʼಕೈʼ ಐವರು ಸದಸ್ಯರ ಸಮಿತಿ ರಚನೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಇತರ ರಾಜಕೀಯ ಪಕ್ಷಗಳೊಂದಿಗೆ ಸಂಭಾವ್ಯ ಮೈತ್ರಿಗಳಿಗೆ ಸಂಬಂಧಿಸಿದಂತೆ ಚರ್ಚೆಗಳನ್ನು ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.

ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ನೇತೃತ್ವದ ರಾಷ್ಟ್ರೀಯ ಮೈತ್ರಿ ಸಮಿತಿಯಲ್ಲಿ ಸದಸ್ಯರನ್ನಾಗಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಹಿರಿಯ ನಾಯಕ ಮೋಹನ್ ಪ್ರಕಾಶ ಅವರನ್ನು ನೇಮಕಗೊಳಿಸಲಾಗಿದೆ.

2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುವ ಮತ್ತು ಆ ಬಗ್ಗೆ ಚರ್ಚಿಸುವ ಹೊಣೆಯನ್ನು ಸಮಿತಿಗೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದವು.

andolanait

Recent Posts

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

8 hours ago

ಕಡಲೂರಿನಲ್ಲಿ ಹಕ್ಕಿಜ್ವರ ಆತಂಕ: 35,647 ಕೋಳಿಗಳ ಸಾವು!

ತಮಿಳುನಾಡು: ಇಲ್ಲಿನ ಕಡಲೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದಾಗಿ ವರದಿಯಾಗಿದೆ. ಅಕ್ಟೋಬರ್‌ 30ರಿಂದ ನವೆಂಬರ್‌ 13ರವರೆಗೆ ಒಟ್ಟು 35,647 ಕೋಳಿಗಳು ಸಾವನ್ನಪ್ಪಿವೆ…

8 hours ago

ರಾಮಲೀಲಾ ಮೈದಾನದಲ್ಲಿ ಸಭೆ–ಪ್ರತಿಭಟನೆಗೆ ಹೊಸ ನಿಯಮ: 50 ಸಾವಿರ ಜನರ ಮಿತಿ!

ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ…

9 hours ago

ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬ ಸಮೇತ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೇಂದ್ರ…

11 hours ago

ಮೈಸೂರು| ಹುಲಿಗಾಗಿ ಇಟ್ಟ ಬೋನಿಗೆ ಬಿದ್ದ ಚಿರತೆ!

ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ…

12 hours ago

ನಂದಿನಿ ಮೊಸರಿನಲ್ಲಿ ಸಿಮ್‌ ಕಾರ್ಡ್‌ ಪ್ರಕರಣಕ್ಕೆ ತಿರುವು; ಪತ್ನಿ ಬಳಸುತ್ತಿದ್ದ ಸಿಮ್‌, ವಿಡಿಯೋ ಹಂಚಿದ್ದ ವ್ಯಕ್ತಿಯಿಂದ ಕ್ಷಮೆಯಾಚನೆ!

ಮಂಡ್ಯ: ನಂದಿನಿ ಮೊಸರು ಪ್ಯಾಕೆಟ್‌ನಲ್ಲಿ ಸಿಮ್‌ ಕಾರ್ಡ್‌ ಪತ್ತೆಯಾಗಿದೆ ಎಂಬ ಪ್ರಕರಣಕ್ಕೆ ಪೊಲೀಸ್‌ ವಿಚಾರಣೆ ವೇಳೆ ತಿರುವು ಸಿಕ್ಕಿದೆ. ಮೊಸರಿನಲ್ಲಿ…

13 hours ago