ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ ( ಜನವರಿ 24 ) ಕರ್ಪೂರಿ ಠಾಕೂರ್ ಅವರ ನೂರನೇ ವರ್ಷದ ಜನ್ಮದಿನಾಚರಣೆ ಇದ್ದು, ಈ ವಿಶೇಷ ದಿನಕ್ಕೆ ಒಂದು ದಿನ ಮುಂಚಿತವಾಗಿ ಈ ಗೌರವ ಸಂದಿದೆ.
ಕರ್ಪೂರಿ ಠಾಕೂರ್ ರಾಜಕಾರಣಿಯಾಗಿ ಮಾತ್ರವಲ್ಲದೇ ಹಿಂದುಳಿದ ವರ್ಗಗಳ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು. ತಮ್ಮ ಅವಧಿಯಲ್ಲಿ ಎರಡು ಬಾರಿ ಬಿಹಾರದ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಹಾಗೂ ನಾಯಕನಾಗಿದ್ದರು. ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿ ನೀಡಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.