ರಾಷ್ಟ್ರೀಯ

ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ ( ಜನವರಿ 24 ) ಕರ್ಪೂರಿ ಠಾಕೂರ್‌ ಅವರ ನೂರನೇ ವರ್ಷದ ಜನ್ಮದಿನಾಚರಣೆ ಇದ್ದು, ಈ ವಿಶೇಷ ದಿನಕ್ಕೆ ಒಂದು ದಿನ ಮುಂಚಿತವಾಗಿ ಈ ಗೌರವ ಸಂದಿದೆ.

ಕರ್ಪೂರಿ ಠಾಕೂರ್‌ ರಾಜಕಾರಣಿಯಾಗಿ ಮಾತ್ರವಲ್ಲದೇ ಹಿಂದುಳಿದ ವರ್ಗಗಳ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು. ತಮ್ಮ ಅವಧಿಯಲ್ಲಿ ಎರಡು ಬಾರಿ ಬಿಹಾರದ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್‌ ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಹಾಗೂ ನಾಯಕನಾಗಿದ್ದರು. ಕರ್ಪೂರಿ ಠಾಕೂರ್‌ ಅವರಿಗೆ ಈ ಪ್ರಶಸ್ತಿ ನೀಡಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

53 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

55 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

57 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

60 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago