ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ. ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಪ್ರಾಥಮಿಕ ತಪಾಸಣೆ ಮತ್ತು ಚಿಕಿತ್ಸೆಯ ನಂತರ ರಾವತ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಲ್ದ್ವಾನಿಯಿಂದ ಕಾಶಿಪುರ್‍ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್ಪುರದಲ್ಲಿ ಡಿವೈಡರ್‍ಗೆ ಡಿಕ್ಕಿ ಹೊಡೆಯಿತು. ಇದರಿಂದ ನನಗೆ ಸಣ್ಣ ಪ್ರಮಾಣದ ಗಾಯಾಗಳಾಗಿದ್ದು, ನಾನು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡ ಬಳಿಕ ವೈದ್ಯರು ಎಲ್ಲವನ್ನೂ ಖಚಿತಪಡಿಸಿ ನನ್ನನ್ನು ಅಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರೀಶ್ ರಾವತ್ ಬರೆದಿದ್ದಾರೆ.
ನನ್ನ ಅಪಘಾತದ ಬಗ್ಗೆ ಸಾಮಾಜಿಕ ಮಾಧ್ಯಮದ ಪೋಸ್ಟ್ಗ್‍ಳನ್ನು ನೋಡಿದ ನಂತರ ಕೆಲವರು ಕಳವಳ ವ್ಯಕ್ತಪಡಿಸಬಹುದು. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‍ನಲ್ಲಿ ಬರೆದಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…