Mysore
23
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಇನ್ಮುಂದೆ ಬಿಜೆಪಿ, ನರೇಂದ್ರ ಮೋದಿ ಆರಾಧಿಸುವ ಸಂಘಟನೆಯಾಗಲಿದೆ : ಚಿದಂಬರಂ ವ್ಯಂಗ್ಯ

ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು.

ಕೇಸರಿ ಕಲಿಗಳ ಪಕ್ಷವು ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಆದರೆ ಪ್ರಧಾನಿ ನರೇಂದ್ರಮೋದಿಯನ್ನು ಆರಾಧಿಸುವು ಪಕ್ಷವಾಗಲಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಭಾನುವಾರ ಹೇಳಿದರು.

ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಭಿವ್ಯಕ್ತಿ ಮತ್ತು ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಮೋದಿ ಹಾಗೂ ಕೇಂದ್ರದ ವಿರುದ್ಧ ಮಾತನಾಡುವವರ ಮೇಲೆ ಸುಳ್ಳ ಕೇಸ್‌ ದಾಖಲಿಸಲಾಗುತ್ತಿದೆ. ಸದ್ಯ ದೇಶದಲ್ಲಿ ಪ್ರಜಾಪ್ರಭತ್ವವನ್ನು ಮರುಸ್ಥಾಪನೆ ಮಾಡುವ ಅವಶ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ಹೆಸರಿಟ್ಟಿಲ್ಲ. ಬದಲಿಗೆ ಅದನ್ನು ಬಿಜೆಪಿಯವರು ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಇದು ಮೋದಿ ಆರಾಧನೆಯ ಸಂಘಟನೆಯಾಗಿ ಮಾರ್ಪಟ್ಟಿದೆ. ಈ ಸಂಘಟನೆ ಮೋದಿಯನ್ನು ಮಾತ್ರ ಆರಾಧಿಸುತ್ತದೆ ಎಂದು ವ್ಯಂಗ್ಯವಾಡಿದರು. ಮೋದಿ ಕಿ ಗ್ಯಾರಂಟಿ ಎನ್ನುವುದು ಆರಾಧನೆಯನ್ನು ನೆನಪಿಸುತ್ತಿದೆ. ಭಾರತದಲ್ಲಿ ಆ ಆರಾಧನೆಯು ಬಲಗೊಳ್ಳಲು ಪ್ರಾರಂಭಿಸಿದೆ ಇದು ಸರ್ವಾಧಿಕಾರಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ʻಇಂಡಿಯಾʼ ಇದಕ್ಕೆ ಅವಕಾಶ ನೀಡುವುದಿಲ್ಲ. ದೇಶ ಎದುರಿಸುತ್ತಿರುವ ದೊಡ್ಡ ಸವಾಲು ನಿರುದ್ಯೋಗ, ಕಾಂಗ್ರೆಸ್‌ ಪ್ರಣಾಳಿಕೆಯು ಉದ್ಯೋಗ ಸೃಷ್ಟಿ ಮತ್ತು ಸಂಪತ್ತು ಉತ್ಪಾದನೆಯ ಬಗ್ಗೆ ಮಾತುಕೊಟ್ಟಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾಧಿತ ಕಾಯ್ದೆ ಸಿಎಎ ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪಿ.ಚಿದಂಬರಂ ,ತಮಿಳುನಾಡಿನ ಎಲ್ಲಾ 39 ಸ್ಥಾನಗಳು ಮತ್ತು ಪಾಂಡಿಚೇರಿಯ ಒಂದು ಸ್ಥಾನವನ್ನು ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!