ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು.
ಕೇಸರಿ ಕಲಿಗಳ ಪಕ್ಷವು ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಆದರೆ ಪ್ರಧಾನಿ ನರೇಂದ್ರಮೋದಿಯನ್ನು ಆರಾಧಿಸುವು ಪಕ್ಷವಾಗಲಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಭಾನುವಾರ ಹೇಳಿದರು.
ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಮೋದಿ ಹಾಗೂ ಕೇಂದ್ರದ ವಿರುದ್ಧ ಮಾತನಾಡುವವರ ಮೇಲೆ ಸುಳ್ಳ ಕೇಸ್ ದಾಖಲಿಸಲಾಗುತ್ತಿದೆ. ಸದ್ಯ ದೇಶದಲ್ಲಿ ಪ್ರಜಾಪ್ರಭತ್ವವನ್ನು ಮರುಸ್ಥಾಪನೆ ಮಾಡುವ ಅವಶ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ಹೆಸರಿಟ್ಟಿಲ್ಲ. ಬದಲಿಗೆ ಅದನ್ನು ಬಿಜೆಪಿಯವರು ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಇದು ಮೋದಿ ಆರಾಧನೆಯ ಸಂಘಟನೆಯಾಗಿ ಮಾರ್ಪಟ್ಟಿದೆ. ಈ ಸಂಘಟನೆ ಮೋದಿಯನ್ನು ಮಾತ್ರ ಆರಾಧಿಸುತ್ತದೆ ಎಂದು ವ್ಯಂಗ್ಯವಾಡಿದರು. ಮೋದಿ ಕಿ ಗ್ಯಾರಂಟಿ ಎನ್ನುವುದು ಆರಾಧನೆಯನ್ನು ನೆನಪಿಸುತ್ತಿದೆ. ಭಾರತದಲ್ಲಿ ಆ ಆರಾಧನೆಯು ಬಲಗೊಳ್ಳಲು ಪ್ರಾರಂಭಿಸಿದೆ ಇದು ಸರ್ವಾಧಿಕಾರಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ʻಇಂಡಿಯಾʼ ಇದಕ್ಕೆ ಅವಕಾಶ ನೀಡುವುದಿಲ್ಲ. ದೇಶ ಎದುರಿಸುತ್ತಿರುವ ದೊಡ್ಡ ಸವಾಲು ನಿರುದ್ಯೋಗ, ಕಾಂಗ್ರೆಸ್ ಪ್ರಣಾಳಿಕೆಯು ಉದ್ಯೋಗ ಸೃಷ್ಟಿ ಮತ್ತು ಸಂಪತ್ತು ಉತ್ಪಾದನೆಯ ಬಗ್ಗೆ ಮಾತುಕೊಟ್ಟಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾಧಿತ ಕಾಯ್ದೆ ಸಿಎಎ ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪಿ.ಚಿದಂಬರಂ ,ತಮಿಳುನಾಡಿನ ಎಲ್ಲಾ 39 ಸ್ಥಾನಗಳು ಮತ್ತು ಪಾಂಡಿಚೇರಿಯ ಒಂದು ಸ್ಥಾನವನ್ನು ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…