ರಾಷ್ಟ್ರೀಯ

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಉಗ್ರ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗ್ಯಾಂಗ್‌ಸ್ಟರ್‌ ಸತೀಂದರ್‌ಜಿತ್‌ ಸಿಂಗ್‌ ಅಲಿಯಾಸ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರಕಾರ ಘೋಷಿಸಿದೆ.

1967ರ ಕಾನೂನುಬಾಹಿರ ಚುಟುವಟಿಕೆ ತಡೆ ಕಾಯಿದೆಯಡಿ ಗೋಲ್ಡಿ ಬ್ರಾರ್‌ನನ್ನು ಉಗ್ರ ಎಂದು ಘೋಷಿಸಲಾಗಿದೆ.

ಗೋಲ್ಡಿ ಬ್ರಾರ್‌ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್‌ ಖಾಲ್ಸಾ ಇಂಟರ್‌ನ್ಯಾಷನಲ್‌ ಜೊತೆ ನಿಕಟ ಸಂಪರ್ಕ ಹೊಂದಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲ ಹೊಂದಿರುವ ಗೋಲ್ಡಿ ಬ್ರಾರ್‌ ಉಗ್ರವಾದದ ಪ್ರತಿಪಾದಕನಾಗಿದ್ದಾನೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಕಾರಣಿಗಳ ಅಪಹರಣ, ಬೆದರಿಕೆ, ಹತ್ಯೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈತನ ಕೈವಾಡವಿದೆ. ಗ್ರೆನೇಡ್‌ ಸೇರಿದಂತೆ ಮದ್ದು ಗುಂಡುಗಳ ಕಳ್ಳ ಸಾಗಣೆ, ಶಾರ್ಪ್‌ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳ ಪೂರೈಕೆ ಮತ್ತಿತರ ಕುಕೃತ್ಯಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಗೋಲ್ಡಿ ಬ್ರಾರ್‌ ಹಾಗೂ ಆತನ ಸಹಚರರು ದೇಶ ವಿರೋಧಿ ಚಟುವಟಿಕೆಗಳ ಮೂಲಕ ಪಂಜಾಬ್‌ನಲ್ಲಿ ಶಾಂತಿ, ಕೋಮು ಸೌಹಾರ್ದತೆ ಕದಡುವುದು, ಕಾನೂನು ಸುವ್ಯವಸ್ಥೆ ಹಾಳುಗೆಡುವಲ್ಲಿ ಪಿತೂರಿ ನಡೆಸಿದ್ದಾರೆ,” ಎಂದು ಗೃಹ ಸಚಿವಾಲಯ ಹೇಳಿದೆ.

ಪಂಜಾಬ್‌ನ ಮುಕ್ತಸರ್‌ ಸಾಹಿಬ್‌ ಗೋಲ್ಡಿ ಬ್ರಾರ್‌ನ ಹುಟ್ಟೂರು. ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಜತೆ ನಿಕಟ ಸಂಪರ್ಕ ಹೊಂದಿದ್ದಾನೆ. ಮಾನ್ಸಾ ಜಿಲ್ಲೆಯಲ್ಲಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ನಂತರ 2022ರ ಜೂನ್‌ನಲ್ಲಿ ಗೋಲ್ಡಿ ಬ್ರಾರ್‌ ಹಸ್ತಾಂತರಕ್ಕಾಗಿ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago