ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ.
ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. ರಾಮಲಲ್ಲಾ ವಿಗ್ರಹವನ್ನು ಕ್ರೇನ್ ಸಹಾಯದಿಂದ ಗರ್ಭಗುಡಿಗೆ ಇರಿಸಲಾಯಿತು. ಅದಕ್ಕು ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.
ಮೈಸೂರಿನ ಶಿಲ್ಪ ಅರುಣ್ ಯೋಗಿರಾಜ್ ಅವರಿಂದ ನಿರ್ಮಿತವಾಗಿರುವ ರಾಮಲಲ್ಲಾ ಮೂರ್ತಿಯನ್ನು ನೆನ್ನೆ(ಬುಧವಾರ) ಸಂಜೆ ಮರೆವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ಗರ್ಭಗುಡಿಯಲ್ಲಿರಿಸುವ ಮುನ್ನಾ ವಿಶೇಷ ಪೂಜೆ ನಡೆಸಲಾಯಿತು. ಮತ್ತು ಜನವರಿ 22ರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಆಚರಣೆಯ ಸಂಬಂಧ ಕುಶಲ ಪೂಜೆ ಕೈಂಕರ್ಯ ನೆರವೇರಿತು.