ಬಾಂಗ್ಲಾದೇಶ : ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಗೈರುಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ.
ವಿರೋಧ ಪಕ್ಷ BNP ಚುನಾವಣೆಯನ್ನು ಬಹಿಷ್ಕರಿಸಿದೆ ಮತ್ತು 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮನವಿ ಮಾಡಿದೆ. ದೇಶಾದ್ಯಂತ 300 ಕ್ಷೇತ್ರಗಳಲ್ಲಿ ಮತದಾನಕ್ಕೆ ಬಹುತೇಕ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಭದ್ರತಾ ವ್ಯವಸ್ಥೆಯನ್ನೂ ಖಚಿತಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ಪ್ರಕಾರ, 42,000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಭಾನುವಾರ ನಡೆಯಲಿರುವ ಮತದಾನದಲ್ಲಿ ಒಟ್ಟು 11.96 ಕೋಟಿ ನೋಂದಾಯಿತ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಈ ಸಾರ್ವತ್ರಿಕ ಚುನಾವಣೆಯಲ್ಲಿ 27 ರಾಜಕೀಯ ಪಕ್ಷಗಳಿಂದ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ ಮತ್ತು ಅವರಲ್ಲದೆ 436 ಸ್ವತಂತ್ರ ಅಭ್ಯರ್ಥಿಗಳೂ ಇದ್ದಾರೆ.
ಭಾರತದ ಮೂವರು ವೀಕ್ಷಕರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು 12ನೇ ಸಾರ್ವತ್ರಿಕ ಚುನಾವಣೆಯ ಮೇಲೆ ನಿಗಾ ಇಡಲಿದ್ದಾರೆ. ಬಿಗಿ ಭದ್ರತೆಯ ನಡುವೆ ಈ ಚುನಾವಣೆ ನಡೆಯುತ್ತಿದೆ.
ಬಾಂಗ್ಲಾದೇಶದ ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್, ‘ನಮ್ಮ ಸಾರ್ವತ್ರಿಕ ಚುನಾವಣೆಗಳನ್ನು ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ನೋಡಬೇಕೆಂದು ನಾವು ಬಯಸುತ್ತೇವೆ.
ಬಾಂಗ್ಲಾದೇಶ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರವಾಗಿದ್ದು, ವಿವಿಧ ಅಂತಾರಾಷ್ಟ್ರೀಯ ದಾಖಲೆಗಳಿಗೂ ಸಹಿ ಹಾಕಿದೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜನವರಿ 8ರಂದು ಬೆಳಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…