Mysore
23
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹಲಾಲ್‌ ನಿಷೇಧ: ಯುಪಿ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌

ನವದೆಹಲಿ : ಹಲಾಲ್ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಗೆ ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ಮತ್ತು ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು​ (ಶುಕ್ರವಾರ) ವಿಚಾರಣೆ ನಡೆಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್​​​ ಜಾರಿ ಮಾಡಿದೆ.

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದೆ. ಆರ್ಥಿಕ ಲಾಭಕ್ಕಾಗಿ ನಕಲಿ ‘ಹಲಾಲ್’ ಪ್ರಮಾಣೀಕರಣವನ್ನು ನೀಡಿ ಆ ಮೂಲಕ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಹಲವಾರು ಸಂಸ್ಥೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು. ಇದರಿಂದ ಉತ್ತರ ಪ್ರದೇಶ ಸರ್ಕಾರವು ಕಳೆದ ತಿಂಗಳು ರಾಜ್ಯಾದ್ಯಂತ “ಹಲಾಲ್ ಪ್ರಮಾಣೀಕೃತ” ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿತ್ತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ