ನವದೆಹಲಿ : ಹಲಾಲ್ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಗೆ ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ಮತ್ತು ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಿಚಾರಣೆ ನಡೆಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದೆ. ಆರ್ಥಿಕ ಲಾಭಕ್ಕಾಗಿ ನಕಲಿ ‘ಹಲಾಲ್’ ಪ್ರಮಾಣೀಕರಣವನ್ನು ನೀಡಿ ಆ ಮೂಲಕ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಹಲವಾರು ಸಂಸ್ಥೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು. ಇದರಿಂದ ಉತ್ತರ ಪ್ರದೇಶ ಸರ್ಕಾರವು ಕಳೆದ ತಿಂಗಳು ರಾಜ್ಯಾದ್ಯಂತ “ಹಲಾಲ್ ಪ್ರಮಾಣೀಕೃತ” ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿತ್ತು.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…