ಬೆಂಗಳೂರು : 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲೂ ರಾಷ್ಟ್ರಧ್ವಜವನ್ನು ಆರೋಹಣ ಮಾಡುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮದ ಬಗ್ಗೆ ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಮತ್ತು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
ನಮ್ಮ ವೈವಿಧ್ಯತೆಯಲ್ಲಿ ಭರವಸೆ, ಆಕಾಂಕ್ಷೆಗಳು ಮತ್ತು ಏಕತೆಯ ಸಂಕೇತ, ತಿರಂಗ ನಮ್ಮೆಲ್ಲ ಭಾರತೀಯರ ಹೆಮ್ಮೆ.
ಸ್ವಾತಂತ್ರ್ಯದ 75 ವರ್ಷಗಳ ಸಂದರ್ಭದಲ್ಲಿ, ನಮ್ಮ ರಾಷ್ಟ್ರದ ಗುರುತನ್ನು, ಭಾರತೀಯ ರಾಷ್ಟ್ರಧ್ವಜವನ್ನು ನಮ್ಮ ಮನೆಗಳಿಗೆ ತರೋಣ ಮತ್ತು 13 ರಿಂದ 15 ಆಗಸ್ಟ್ 2022 ರವರೆಗೆ ಅದನ್ನು ಹಾರಿಸೋಣ. 🇮🇳
ಎಂದು ಟ್ವೀಟ್ ಮಾಡಿದ್ದಾರೆ.