ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
22 ವರ್ಷ 37 ದಿನಗಳ ಜೈಸ್ವಾಲ್ ಈ ಸಾಧನೆ ಮಾಡಿದ ಮೂರನೇ ಆಟಗಾರ. ಇದಕ್ಕೂ ಮುನ್ನ ಮಾಜಿ ಆಟಗಾರ ವಿನೋದ್ ಕಾಂಬ್ಲಿ 1993ರಲ್ಲಿ ತಮ್ಮ 21 ವರ್ಷ 32 ದಿನಗಳ ಹರಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ದ್ವಿಶತಕ ಬಳಿಕ ಜಿಂಬಾಬ್ವೆ ವಿರುದ್ಧವೂ ದ್ವಿಶತಕ ಸಿಡಿಸಿದ್ದರು. ಇವರಿಗಿಂತಲೂ ಮುನ್ನ 1971ರಲ್ಲಿ ಸುನೀಲ್ ಗವಾಸ್ಕರ್ ತಮ್ಮ 21 ವರ್ಷ ಹಾಗೂ 283 ದಿನಗಳ ಹರಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದ್ವಿಶತಕ ದಾಖಲಿಸಿದ್ದರು. ಅತಿ ಕಿರಿಯ ವಯಸ್ಸಿನಲ್ಲೇ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಈವರೆಗೂ ಕಾಂಬ್ಲಿ ಹೆಸರಲ್ಲೇ ಉಳಿದಿದೆ.
ಶಾಖಪಟ್ಟಣಂನಲ್ಲಿನ ಡಾ. ವೈಎಸ್.ರಾಜಶೇಖರ ರೆಡ್ಡಿ ಸ್ಟೇಡಿುಂಂನಲ್ಲಿ ನಡೆುುಂತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ 290 ಎಸೆತಗಳಲ್ಲಿ 209 ರನ್ ಸಿಡಿಸಿದರು. ಇದರಲ್ಲಿ 19 ಬೌಂಡರಿ, 07 ಸಿಕ್ಸರ್ ಸೇರಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…