ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಇದು ಕಲಾಪಕ್ಕೆ ಅಡ್ಡಿಪಡಿಸುವಂತಿದ್ದು, 13 ವಿರೋಧ ಪಕ್ಷಗಳ ಒಟ್ಟು 90 ಸದಸ್ಯರನ್ನು ಲೋಕಸಭೆಯ ಚಳಿಗಾಲ ಅಧಿವೇಶದನದಿಂದ ಉಳಿದ ಅವಧಿಗೆ ಸಂಸತ್‌ನಿಂದ ಅಮಾನತುಗೊಳಸಿಲಾಗಿದೆ. ಇದು ಸಂಸತ್ ಇತಿಹಾಸದಲ್ಲಿಯೇ ಅತಿಹೆಚ್ಚು ಅಮಾನತುಗೊಂಡ ದಾಖಲೆಯಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಇಂದು 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಈಗ 46 ಜನ ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇವರೆಗೆ ಒಟ್ಟು 90 ಜನರನ್ನು ಸಂಸತ್‌ನಿಂದ ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಸಂಸದರಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…