ಹರಿಯಾಣ (ಫರಿದಾಬಾದ್) : ಕೇಂದ್ರೀಕೃತ ಸಂಪೂರ್ಣ ಸ್ವಯಂಚಾಲಿತ ಪ್ರಯೋಗಾಲಯ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ 2,600 ಹಾಸಿಗೆಗಳ ಖಾಸಗಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದ್ದಾರೆ.
ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಆರೋಗ್ಯ ಮತ್ತು ಆಧ್ಯಾತ್ಮಿಕತೆ ನಿಕಟ ಸಂಬಂಧ ಹೊಂದಿರುವ ದೇಶವಾಗಿದೆ. ಕೋವಿಡ್ 19 ಯಶಸ್ವಿ ಆಧ್ಯಾತ್ಮಿಕ-ಖಾಸಗಿ ಪಾಲುದಾರಿಕೆಗೆ ಪರಿಪೂರ್ಣ ಉದಾಹರಣೆಯಾಗಿದೆ ಎಂದರು. ಇದು ಜಾಗೃತಿ ಮೂಡಿಸಲು ಮತ್ತು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಕಾರ್ಯಗತಗೊಳಿಸಲು ಸಹಾಯ ಮಾಡಲಿದೆ ಎಂದರು.
ಮುಂದುವರಿದು, “ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ದೇಶದ ಪ್ರಗತಿಗೆ ಕಾರಣವಾಗುತ್ತದೆ” ಎಂದು ಪ್ರಧಾನಿ ಹೇಳಿದರು