Mysore
20
overcast clouds
Light
Dark

ಇಂಡಿಯಾ ಮೈತ್ರಿಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಸಿಎಂ ಸ್ಟಾಲಿನ್‌

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ ಪಕ್ಷವಾಗಿದ್ದು, ಡಿಎಂಕೆ ಪ್ರಣಾಳಿಕೆಯಲ್ಲಿ ಸದ್ಯ ಮೇಕೆದಾಟು ಬಗ್ಗೆ ಉಲ್ಲೇಖಿಸಿದ್ದು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮತದಾರರು ಮಣೆ ಹಾಕಲಿದ್ದಾರೆಯಾ ಕಾಣಬೇಕಿದೆ.

ಡಿಎಂಕೆ ಪ್ರಣಾಳಿಕೆಯಿಂದಾಗಿ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಕೋವಿಡ್‌ ಸಮಯದಲ್ಲಿ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ದೊಡ್ಡ ಪಾದಯಾತ್ರೆಯನ್ನೇ ಕಾಂಗ್ರೆಸ್‌ ನಡೆಸಿತ್ತು. ಆದರೆ, ಈಗ ಕಾಂಗ್ರೆಸ್‌ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುತ್ತೇವೆ ಎಂದಿರುವುದು ಲೋಕ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಅಸ್ತ್ರ ಸಿಕ್ಕಂತಾಗಿದೆ.

ಇನ್ನು ಈ ಮೈತ್ರಿ ಬಗ್ಗೆ ಬಿಜೆಪಿ ಡಿಕೆಶಿ ಅವರೇ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.