ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.
ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಮುಖ ಪಕ್ಷವಾಗಿದ್ದು, ಡಿಎಂಕೆ ಪ್ರಣಾಳಿಕೆಯಲ್ಲಿ ಸದ್ಯ ಮೇಕೆದಾಟು ಬಗ್ಗೆ ಉಲ್ಲೇಖಿಸಿದ್ದು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮತದಾರರು ಮಣೆ ಹಾಕಲಿದ್ದಾರೆಯಾ ಕಾಣಬೇಕಿದೆ.
ಡಿಎಂಕೆ ಪ್ರಣಾಳಿಕೆಯಿಂದಾಗಿ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಕೋವಿಡ್ ಸಮಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ದೊಡ್ಡ ಪಾದಯಾತ್ರೆಯನ್ನೇ ಕಾಂಗ್ರೆಸ್ ನಡೆಸಿತ್ತು. ಆದರೆ, ಈಗ ಕಾಂಗ್ರೆಸ್‌ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುತ್ತೇವೆ ಎಂದಿರುವುದು ಲೋಕ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಅಸ್ತ್ರ ಸಿಕ್ಕಂತಾಗಿದೆ.
ಇನ್ನು ಈ ಮೈತ್ರಿ ಬಗ್ಗೆ ಬಿಜೆಪಿ ಡಿಕೆಶಿ ಅವರೇ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…